ಪುರುಷೋತ್ತಮ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ.

mng-16jan-cheque
Published on


ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡ ಗೋರಿಗುಡ್ಡ ನಿವಾಸಿ ಆಟೋ ಚಾಲಕ ಪುರುಷೋತ್ತಮ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮಂಜೂರಾಗಿದ್ದು ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಜಿಲ್ಲಾಧಿಕಾರಿ
ಕಚೇರಿಯಲ್ಲಿ ಚೆಕ್ ಹಸ್ತಾಂತರಿಸಿದರು. ಪರಿಹಾರ ಕೋರಿ ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಅವರು ಮುಖ್ಯಮಂತ್ರಿ ಅವರಿಗೆ ಅರ್ಜಿ ಸಲ್ಲಿಸಿದ್ದರು. ಚೆಕ್ ಹಸ್ತಾಂತರ ಸಂದರ್ಭ ಐವನ್ ಡಿಸೋಜ, ಮನಪಾ ಪ್ರತಿಪಕ ನಾಯಕ ಪ್ರವೀಣ್‌ಚಂದ್ರ ಆಳ್ವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಲೀಂ, ಉಪಾಧ್ಯಕ್ಷ ಸದಾಶಿವ ಅಮೀನ್ ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net