ಅರಣ್ಯ ಪಾಲಕ ಕೃಷ್ಣಾ ನಾಯ್ಕ ಅವರಿಗೆ ಸಿಎಂ ಚಿನ್ನದ ಪದಕ

CM Award to porest officer
Published on

ಹಾನಗಲ್ಲ: ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ 2022ನೇ ಸಾಲಿಗೆ ಶೌರ್ಯ ಹಾಗೂ ದಿಟ್ಟತನ ಮೆರೆದ ಹಾಗೂ ಅರಣ್ಯ ಅಭಿವೃದ್ಧಿ, ಅರಣ್ಯ ಸಂರಕ್ಷಣೆ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಸಿಬ್ಬಂದಿಗೆ ಕೊಡಮಾಡುವ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಹಾನಗಲ್ಲಿನ ಅರಣ್ಯ ಪಾಲಕ ಕೃಷ್ಣಾ ನಾಯ್ಕ ಭಾಜನರಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿನ್ನದ ಪದಕ ನೀಡಿ ಗೌರವಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net