ನ.9 ರಂದು ಕೆರೆ ತುಂಬಿಸುವ ಯೋಜನೆಗೆ ಸಿಎಂ ಚಾಲನೆ

kdl-1
ಕೂಡ್ಲಿಗಿಯ ಶಾಸಕರ ಕಚೇರಿ ಮುಂಭಾಗದ ಮೈದಾನದಲ್ಲಿ ನಿರ್ಮಿಸುತ್ತಿರುವ ಬೃಹತ್ ವೇದಿಕೆ ಹಾಗೂ ಪೆಂಡಾಲ್ ನಿರ್ಮಾಣದ ಕಾಮಗಾರಿಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು. ತಹಸೀಲ್ದಾರ್ ವಿ. ಕೆ.ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯ್ಯದ್ ಶುಕೂರ್ ಇತರರಿದ್ದರು.
Published on

ಕೂಡ್ಲಿಗಿ: ನ. 9 ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಣದಲ್ಲಿ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವರು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಮುಖ್ಯಮಂತ್ರಿ ಕಾರ್ಯಕ್ರಮ ಹಿನ್ನೆಲೆ ಪಟ್ಟಣದ ಶಾಸಕರ ಕಚೇರಿ ಬಳಿ ಬೃಹತ್ ಪೆಂಡಾಲ್ ಹಾಕುವ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರದ ಬಹುದಿನಗಳ ಕನಸಾಗಿದ್ದ ನೀರಾವರಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಸಿಎಂ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಹುತೇಕ ಸಚಿವರು ಆಗಮಿಸುವರು. 25 ಸಾವಿರ ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಅ.28 ರಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಜತೆ ಸಭೆ ಮಾಡಿ ಕಾರ್ಯಕ್ರಮದ ರೂಪುರೇಷೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ಲಿಫ್ಟ್ ಮೂಲಕ ನೀರನ್ನು ಹರಿಸಲಾಗುವುದು. ಇದರಿಂದ ಈ ಭಾಗದ ರೈತರ ಬದುಕು ಹಸನಾಗಲಿದೆ. ಹೀಗಾಗಿ ಕ್ಷೇತ್ರದ ನೀರಾವರಿ ಹೋರಾಟ ಸಮಿತಿಯವರು, ರೈತರು ಹಾಗೂ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯ್ಯದ್ ಶುಕೂರ್, ಸದಸ್ಯರಾದ ತಳಾಸ ವೆಂಕಟೇಶ, ಕೆ.ಈಶಪ್ಪ, ಸಿರಬಿ ಮಂಜುನಾಥ, ಮುಖ್ಯಾಧಿಕಾರಿ ಎಚ್.ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ಧನ ಗೌಡ ಮುಖಂಡರಾದ ನರಸಿಂಹಗಿರಿ ವೆಂಕಟೇಶ, ನಾಗಮಣಿ ಜಿಂಕಾಲ್, ಪ್ರಭಾಕರ್, ಜಿಲಾನ್, ಜೆ.ಬಸವರಾಜ, ಜಿ.ಎಂ.ಬಸಣ್ಣ, ದುರುಗೇಶ್, ಶಾಂತನಗೌಡ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net