

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಮಂಗಳೂರು ಘಟಕದ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್‌ಶೇರ್ ಅವರಿಗೆ 2021ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಶುಕ್ರವಾರ ಗೃಹಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿಯಲ್ಲಿ ಪ್ರದಾನ ಮಾಡಿದರು.
ಮಾರ್ಕ್‌ಸೇರಾ ಅವರು ಕಳೆದ 24 ವರ್ಷಗಳಿಂದ ಗೃಹರಕ್ಷಕದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ ಕೃಷಿಕರೂ ಆಗಿರುವ ಇವರು ಸಾವಿರಾರು ಮಕ್ಕಳಿಗೆ ಕೃಷಿ ಪಾಠ ಹೇಳುತ್ತಿದ್ದಾರೆ. ವಿವಿಧ ಹಣ್ಣುಗಳ ಗಿಡಗಳನ್ನು ಬೆಳೆಸಿ ಪ್ರತೀ ವರ್ಷ ಅಗತ್ಯ ಇರುವವರಿಗೆ ಹಂಚುತ್ತಿದ್ದಾರೆ. ನಗರದ ನಡುವೆ ಭತ್ತ, ತರಕಾರಿ ಕೃಷಿ ಮಾಡಿ ಮಾದರಿಯಾಗಿದ್ದಾರೆ. ಇವರನ್ನು ಹಲವಾರು ಸಂಘ ಸಂಸ್ಥೆಗಳು ಗುರುತಿಸಿ ಸನ್ಮಾನಿಸಿವೆ.