ಸಾಹಿತ್ಯ ಸಮ್ಮೇಳನ ತಯಾರಿ ಕುರಿತು ಸಿಎಂ ಸಭೆ

21 HVR 4
Published on

ಹಾವೇರಿ: ನಗರದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ದತೆ ಕುರಿತು ಬೆಳಗಾವಿಯಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಈ ವೇಳೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲಕುಮಾರ, ಶಾಸಕರಾದ ನೆಹರು ಒಲೇಕಾರ, ಅರವಿಂದ ಬೆಲ್ಲದ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಜಂಟಿ ಕಾರ್ಯದರ್ಶಿ ಜಗದೀಶ, ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ ರೋಷನ್, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net