ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಿಎಂ ಸಭೆ

Development work CM meeting
ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ನೇತೃತ್ವದ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿದರು. ಬಿ.ಕೆ.ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ನಸೀರ್ ಅಹ್ಮದ್ ಇದ್ದರು.
Published on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ನೇತೃತ್ವದ ಶಾಸಕರ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಸಾರ್ವಜನಿಕ ಆಸ್ತಿಪಾಸ್ತಿ ಮಾಹಿತಿ ಪಡೆದು ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಜತೆಗೆ ಸರ್ಕಾರದ ಸವಲತ್ತು ಗರಿಷ್ಠ ಜನರಿಗೆ ತಲುಪಿಸುವ ಬಗ್ಗೆ ಸಿಎಂ ಸಲಹೆ ಸೂಚನೆ ನೀಡಿದರು.

ಜತೆಗೆ ವೈದ್ಯಕೀಯ, ಶಿಕ್ಷಣ, ರಸ್ತೆ, ಕುಡಿಯುವ ನೀರು, ಮೂಲ ಸೌಕರ್ಯಗಳನ್ನು ಸೇರಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸುವುದು. ಗ್ಯಾರಂಟಿ ಯೋಜನೆಗಳ ಲಾಭವನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

ಭದ್ರಾವತಿ ಶಾಸಕ, ಕೆಆರ್‌ಐಡಿಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್, ಸಾಗರ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net