ಘಟನೆ ಹೊಣೆ ಹೊತ್ತು ಸಿಎಂ, ಸಚಿವರು ರಾಜೀನಾಮೆ ನೀಡಲಿ

bjp
ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಾಗರಾಜ್, ಶಿವಾನಂದ್, ದೀನದಯಾಳು, ಹೊನ್ನಪ್ಪ, ಶ್ರೀನಾಗ್, ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.
Published on

ಶಿವಮೊಗ್ಗ: ಆರ್‌ಸಿಬಿ ವಿಜಯೋತ್ಸವದ ಸಂದರ್ಭ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ತಪ್ಪು. ಘಟನೆಯ ಹೊಣೆ ಹೊತ್ತು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಘಟಕದ ಪ್ರಮುಖರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸೂಡಾ ಮಾಜಿ ಅಧ್ಯಕ್ಷ ನಾಗರಾಜ್ ಮಾತನಾಡಿ, ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ. ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಸರ್ಕಾರದ ನಿರ್ಲಜ್ಜತನಕ್ಕೆ ನಿದರ್ಶನ. ಎರಡು ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಪೊಲೀಸರನ್ನು ಹೊಗಳಿದ್ದರು. ಏಕಾಏಕಿ ಪೊಲೀಸ್ ಇಲಾಖೆ ಮೇಲೆ ಪ್ರಹಾರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೀನದಯಾಳು ಮಾತನಾಡಿ, ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ಕಡೆ ಹಿಂದುಗಳ ಮೇಲೆ ದೌರ್ಜನ್ಯ, ಇನ್ನೊಂದೆಡೆ ಮುಸ್ಲಿಂ ತುಷ್ಟೀಕರಣ. ಈಗ ಆರ್‌ಸಿಬಿ ತಂಡದ ಜತೆ ಪ್ರಚಾರದ ತೆವಲಿನಿಂದ ಅಮಾಯಕರ ಪ್ರಾಣ ಹರಣ. ಇವೆಲ್ಲವೂ ರಾಜ್ಯ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ. ದಕ್ಷ, ಪ್ರಾಮಾಣಿಕ ಅಧಿಕಾರಿಗಳ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರಮುಖರಾದ ಶಿವಾನಂದ್, ಪ್ರದೀಪ್ ಹೊನ್ನಪ್ಪ, ಮಂಜುನಾಥ್, ಜಗನ್ನಾಥ್, ಶ್ರೀನಾಗ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net