

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಡಾ ಹಗಣದಲ್ಲಿ ಸಿಲುಕಿದ್ದು ನೈತಿಕತೆ ಇದ್ದರೆ ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಸಮಾಜವಾದಿ ಹಿನ್ನಲೆಯಿಂದ ಬಂದವರು ಎಂದು ಹೇಳಿಕೊಳ್ಳುವ ಇವರು ಒಬ್ಬರು ಬಂಡ ಮುಖ್ಯಮಂತ್ರಿ. ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಪರವಾಗಿಕಾಂಗ್ರೆಸ್ ಹೈಕಮಾಂಡ್ ಬೆಂಬಲಕ್ಕೆ ನಿಂತಿದ್ದು ವಿಪರ್ಯಾಸದ ಸಂಗತಿ. ನಾವು ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕೇಳುತ್ತಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ಬೇರೊಬ್ಬರನ್ನು ಮುಖ್ಯಮಂತ್ರಿ ಮಾಡಿದರೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.