

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆರೋಗ್ಯ ಸಂಬಂಧ ಎಂ.ಎಸ್. ರಾಮ್ಯಯ್ಯ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಅಧ್ಯಕ್ಷ ಡಾ. ನರೇಶ್ ಶೆಟ್ಟಿ, ಶನಿವಾರ ಸಂಜೆ ಸುಮಾರು 7 ಗಂಟೆಗೆ ನಿದ್ರೆ ಮಾತ್ರೆ ಸೇವಿಸಿದ್ದ ಸಂತೋಷ್ ಅವರನ್ನು ರಾತ್ರಿ 8.30ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 10 ಗಂಟೆಗೆ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ. ಬೆಳಗ್ಗೆ ತಿಂಡಿ ಸೇವಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ನಿದ್ರೆ ಮಂಪರಿನಲ್ಲೇ ಇರುವ ಸಂತೋಷ್ಗೆ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ. ನಿನ್ನೆ ರಾತ್ರಿಗಿಂತ ಇಂದು ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಎಷ್ಟು ನಿದ್ದೆ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಅಂತ ಹೇಳೋಕೆ ಆಗಲ್ಲ ಎಂದರು.