ಪರಿಶಿಷ್ಟ ಸಮುದಾಯದವರಿಗೆ ಸಿಎಂ ಹುದ್ದೆ ಕೊಡಿ: ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ಅಧ್ಯಕ್ಷ ಗಂಗರಾಜ್ ಒತ್ತಾಯ

CM post is insisted on for Scheduled Community Mandya
Published on

ಮಂಡ್ಯ: ಕಳೆದ 75 ವರ್ಷದಿಂದ ಕಾಂಗ್ರೆಸ್ ಪಕ್ಷದ ನೈಜ ಮತದಾರರಾಗಿರುವ ಕಾರಣ ಮುಂದೆ ಸಿಎಂ ಹುದ್ದೆಯನ್ನು ಪರಿಶಿಷ್ಟ ಸಮುದಾಯದ ವ್ಯಕಿಗಳಿಗೆ ನೀಡಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ಅಧ್ಯಕ್ಷ ಗಂಗರಾಜ್ ಒತಾಯಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ ಪರಿಶಿಷ್ಟ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದರೂ ಉನ್ನತ ಹುದ್ದೆ ಕಲ್ಪಿಸದಿರುವುದು ಕಾಂಗ್ರೆಸ್‌ನ ದೊಡ್ಡ ಲೋಪವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಶೇ.25ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿದ್ದಾರೆ. ಶೇ.18ರಷ್ಟು ಧಾರ್ಮಿಕ ಅಲ್ಪಸಂಖ್ಯಾತರು, ಶೋಷಿತರು ಮತ್ತು ತೀವ್ರ ಶೋಷಿತ ಸಮುದಾಯದವರಾಗಿದ್ದಾರೆ. ಆದ್ದರಿಂದ ಸಿಎಂ ಹುದ್ದೆ ನೀಡಬೇಕು. ಈ ನಿಟ್ಟಿನಲ್ಲಿ ಜು.4ರಂದು ರಾಹುಲ್‌ಗಾಂಧಿ ಅವರಿಗೂ ಪತ್ರ ಬರೆಯಲಾಗಿದೆ. ಒಂದು ವೇಳೆ ಈ ವಿಚಾರದಲ್ಲಿ ನಿರ್ಲಕ್ಷೃ ವಹಿಸಿದರೆ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷದ ಬಹುದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಕೀಲ ಜೆ.ರಾಮಯ್ಯ, ಅರುಣ್, ಲಿಂಗಪ್ಪ, ಅಮ್ಜದ್‌ಪಾಷಾ, ಪ್ರದೀಪ್, ಅಜಯ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net