

ತುಮಕೂರು: ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿ.2ರಂದು ಸಿಎಂ ಸಿದ್ದರಾಮಯ್ಯರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮತ್ತಿತರರು ಹಾಜರಿದ್ದರು.