

ಮಂಗಳೂರು: ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಶುಕ್ರವಾರ ತಿಳಿಸಿದರು.
ಮುರುಘಾಶ್ರೀಗಳ ಬಂಧನವಾಗುವಾಗ ವಿಳಂಬವಾಗಿದೆ ಎಂಬ ಭಾವನೆ ಸಾರ್ವಜನಿಕರಲ್ಲಿದೆ ಎಂದು ಕೇಳಿದಾಗ ಎಲ್ಲ ವಿಚಾರಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ, ಕಾನೂನು ಪ್ರಕ್ರಿಯೆ ನಡೆಯುತ್ತಿರುವುದರಿಂದ ಈ ಸಂದರ್ಭ ಮಾತನಾಡುವುದು ಸರಿಯಲ್ಲ. ಹೀಗಾಗಿ ಈಗ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ ಎಂದು ಹೇಳಿದರು.