ಮಾಜಿ ಸಿಎಂ ಕುಮಾರಸ್ವಾಮಿ ಅವರಿಗಿರುವ ಜೀವ ಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

BSY HDK
Published on

ಬೆಂಗಳೂರು: ಮಾಜಿ‌ ಸಿಎಂ ಕುಮಾರಸ್ವಾಮಿ ಕೊಲೆ ಬೆದರಿಕೆ ಆರೋಪಕ್ಕೆ ಸಂಬಂಧ ಪಟ್ಟಂತೆ ಅವರಿಗೆ ಏನು ಭದ್ರತೆ ಕೊಡಬೇಕು ಕೊಟ್ಟಿದ್ದೇವೆ. ಜೀವ ಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ ಮಾಡಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ.

ಅವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಇನ್ನೂ ಹೆಚ್ಚಿನ ರಕ್ಷಣೆಯನ್ನು ಸರ್ಕಾರ ಒದಗಿಸಿಕೊಡುತ್ತದೆ. ದಯವಿಟ್ಟು ಈ ಬಗ್ಗೆ ಕುಮಾರಸ್ವಾಮಿ ವಿವರ ಕೊಡಬೇಕು ಎಂದು ಸಿಎಂ ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿಗಳು ದಯವಿಟ್ಟು ಕೊಲೆಯ ಬಗ್ಗೆ ವಿವರ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವನಾಗಿ ನಾನು ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೂರು ದಾಖಲಿಸಲಿ. ತನಿಖೆ ಮಾಡಿಸೋಣ. ಅದು ಬಿಟ್ಡು ಈ ರೀತಿಯಲ್ಲಿ ಹೇಳಿಕೆ ಕೊಡಬಾರದು ಎಂದು ಸಚಿ ಜಗದೀಶ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net