

ಬೆಳಗಾವಿ: ಆರ್ಸಿಬಿ ವಿಜಯೋತ್ಸವದ ಸಾಧಕ&ಬಾಧಕಗಳ ಕುರಿತು ಮುಖ್ಯಮಂತ್ರಿ ವಿಚಾರ ಮಾಡದೇ ಕ್ರೆಡಿಟ್ ಪಡೆದುಕೊಳ್ಳಲು ಹಠಕ್ಕೆ ಬಿದ್ದು ಕಾರ್ಯಕ್ರಮ ಆಯೋಜನೆ ಮಾಡಿ 11 ಜನ ಅಮಾಯಕರ ಸಾವಿಗೆ ಕಾರಣರಾಗಿದ್ದಾರೆ. ಇದಕ್ಕೆ ಪೊಲೀಸ್ ಅಧಿಕಾರಿಗಳು ಹೊಣೆಯಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನೇರ ಹೊಣೆಯಾಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಜವಾಬ್ದಾರಿ ಉತ್ತರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಾದರೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದರು. ನಾನು ಸಂಸದನಾಗಿ ಆಯ್ಕೆಯಾದ ನಂತರ, ಬೆಳಗಾವಿ ಲೋಕಸಭಾ ೇತ್ರದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ಸ್ಥಗಿತಗೊಂಡಿದ್ದ ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಗೆ ಚಾಲನೆ ಕೊಡಿಸಿದ್ದೇನೆ ಎಂದು ಹೇಳಿದರು.
ಆರು ತಿಂಗಳಲ್ಲಿ ಕಾಮಗಾರಿ ಆರಂಭ: ಸುರೇಶ ಅಂಗಡಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಅವಧಿಯಲ್ಲಿ ಬೆಳಗಾವಿ&ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ, ಭೂಸ್ವಾಧಿನ ಪ್ರಕ್ರಿಯೆ ನಡೆಯದೇ ಯೋಜನೆ ಅನುಷ್ಠಾನಕ್ಕೆ ತೊಡಕಾಗಿತ್ತು. ಈಗ ಯೋಜನೆಗೆ ಸ್ವಾಧಿನ ಪಡಿಸಿಕೊಳ್ಳಬೇಕಾದ ಭೂಮಿಗಳ ಸರ್ವೇ ಕಾರ್ಯ ನಡೆಸಲಾಗಿದ್ದು, ರೈತರಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಭೂ ಸ್ವಾಧಿನಪಡಿಸಿಕೊಂಡು 6 ತಿಂಗಳಲ್ಲಿ ಕಾಮಗಾರಿ ಆರಂಭಿಸುತ್ತೇವೆ. ಹಲಗಾ ಮಚ್ಚೆ ಬೈಪಾಸ್ ರಸ್ತೆ ಮತ್ತು ವರ್ತುಲ ರಸ್ತೆ ನಿರ್ಮಾಣಕ್ಕಿದ್ದ ಅಡೆತಡೆ ಪರಿಹರಿಸಲಾಗಿದೆ. ಕೇಂದ್ರವು ರಿಂಗ್ ರಸ್ತೆಗೆ 3,600 ಕೋಟಿ ರೂ. ಮಂಜೂರು ಮಾಡಿದ್ದರೂ ಹಣ ಬಳಸಲಾಗಿಲ್ಲ. ಕಾಮಗಾರಿ ಆರಂಭವಾಗಲಿದೆ ಎಂದರು.
ರಾಜ್ಯದ ಅನುದಾನ ಎಂದು ತಪು$್ಪ ಸಂದೇಶ: ಮಂಗಲ ಅಂಗಡಿ ಅವರು ಸಂಸದರಾಗಿದ್ದ ವೇಳೆ ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿಯಲ್ಲಿ ಯಲ್ಲಮ್ಮನ ಗುಡ್ಡಕ್ಕೆ 18 ಕೋಟಿ ರೂ. ಮಂಜೂರಾಗಿತ್ತು. ಟೆಂಡರ್ ಪ್ರಕ್ರಿಯೆ ನಡೆದಿತ್ತು. ಅದರ ಜತೆಗೆ ಮತ್ತೊಂದು ಯೋಜನೆಯಲ್ಲಿ ಕೇಂದ್ರದಿಂದ 100 ಕೋಟಿ ರೂ. ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದಿಂದ 200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಪ್ಪು ಸಂದೇಶ ನೀಡಲಾಗುತ್ತಿದೆ. ರಾಜ್ಯಪಾಲರ ಸಂದೇಶವಿರುವ ಕೈಪಿಡಿಯಲ್ಲಿ ಕೂಡ 200 ಕೋಟಿ ರೂ. ಪ್ರಸ್ತಾಪವಿದೆ. ಆದರೆ, ಬಜೆಟ್ನಲ್ಲಿ ಮಂಜೂರಾತಿ ಇಲ್ಲ. ಹೀಗೆ ಜನರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಶೆಟ್ಟರ್ ಹೇಳಿದರು.