ರಾಜೀನಾಮೆ ನೀಡಬೇಕಿಲ್ಲ ಸಿಎಂ ಸಿದ್ದರಾಮಯ್ಯ

Rajshekhar Patil
Published on

ಹುಮನಾಬಾದ್: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ. ಇಡೀ ಕಾಂಗ್ರೆಸ್ ಅವರ ಬೆಂಬಲಕ್ಕಿದೆ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲï ಹೇಳಿದರು.

ಎರಡು ಬಾರಿ ಸಿಎಂ, ಎರಡು ಸಲ ಡಿಸಿಎಂ, ಹಣಕಾಸು ಸಚಿವರಾಗಿ ಉತ್ತಮ ಸೇವೆ ನೀಡಿದ್ದಾರೆ. ನಾಲ್ಕು ದಶಕಕ್ಕೂ ಅಧಿಕ ಅವಧಿಯಿಂದ ರಾಜಕೀಯದಲ್ಲಿರುವ ಸಿದ್ದರಾಮಯ್ಯ ಮೇಲೆ ಒಂದೂ ಕಪ್ಪು ಚುಕ್ಕೆ ಇಲ್ಲ. ದೀನ-ದಲಿತರು, ಬಡವರು, ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಅವರ ಹೆಸರಿಗೆ ಕಳಂಕ ತರಲು ಷಡ್ಯಂತ್ರ ನಡೆಯುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯ.ತೆ ವರ್ತಿಸುತ್ತಿದ್ದಾರೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಸಿಎಂ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಹೋರಾಟ ನಡೆಸುತ್ತಿದೆಯಲ್ಲವೆ ಎಂದಾಗ, ಅವರ ಪಾಡಿಗವರು ಹೋರಾಟ ಹೋರಾಟ ಮಾಡುತ್ತಾರೆ. ಮುಖ್ಯಮಂತ್ರಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತಿದ್ದರೆ. ಈಗಾಗಲೇ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಡಾ.ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಹಳ್ಳಿಯಿಂದ ದಿಲ್ಲಿವರೆಗೆ ಎಲ್ಲರೂ ಸಿದ್ದರಾಮಯ್ಯ ಪರ ನಿಂತಿದ್ದಾರೆ ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net