ತಾವು ಕಲಿತ ಶಾಲೆಗೆ 10 ಲಕ್ಷ ರೂ. ವೈಯಕ್ತಿಕ ದೇಣಿಗೆ ನೀಡಿದ ಸಿಎಂ ಸಿದ್ದರಾಮಯ್ಯ

CMSiddaramaiah
Published on

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯನವರು  ತಾವು ಶಿಕ್ಷಣ ಕಲಿತ ಮೈಸೂರಿನ ವರುಣಾ ಹೋಬಳಿಯ ಕುಪ್ಪೆಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೈಯಕ್ತಿಕ ದೇಣಿಗೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು. ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ತಾವು ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೈಯಕ್ತಿಕ ದೇಣಿಗೆ ನೀಡಿದ್ದಾರೆ.

ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಶಿಕ್ಷಣದಿಂದ ಜೀವನ ಉಜ್ವಲಗೊಳಿಸಿಕೊಂಡ ಹಳೆ ವಿದ್ಯಾರ್ಥಿಗಳು ನಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಣ ನೀಡಿ ಅಭಿವೃದ್ಧಿಯ ಜವಾಬ್ದಾರಿಯನ್ನು ಹೊತ್ತಿಕೊಳ್ಳಬೇಕು ಎಂಬ ಸಂದೇಶ ಸಾರಿದ್ದಾರೆ.

 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತಾವು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಸಂವಾದ ನಡೆಸಿದರು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಿಎಂ ಸಲಹೆ ನೀಡಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net