21ರಂದು ಒಂದೇ ವೇದಿಕೆಯಲ್ಲಿ ಸಿದ್ದು, ಬಿಎಸ್‌ವೈ !

BSY and Siddaramaiah
Published on

ತುಮಕೂರು: ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 5ನೇ ಪುಣ್ಯ ಸಂಸ್ಮರಣೋತ್ಸವದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

ಜ.21ರಂದು ಬೆಳಗ್ಗೆ 11ಕ್ಕೆ ಶ್ರೀಮಠದ ಆವರಣದಲ್ಲಿ ಆಯೋಜಿಸಿರುವ ಶಿವಕುಮಾರ ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆವಹಿಸುವರು. ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಗದಗ ಜಗದ್ಗುರು ತೋಂಟಾದರ್ಯ ಸಂಸ್ಥಾನಮಠದ ಅಧ್ಯಕ್ಷ ಡಾ.ಶ್ರೀ ತೋಂಟದ ಸಿದ್ದರಾಮ ಸ್ವಾಮೀಜಿ, ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯವಹಿಸುವರು.

ಸಚಿವ ಸಂಪುಟದ ದಂಡು: ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರಾದ ಡಾ.ಜಿ.ಪರಮೇಶ್ವರ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಎನ್.ಚಲುವರಾಯಸ್ವಾಮಿ ಉಪಸ್ಥಿತರಿರುವರು. ಸಿಎಂ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಬಿ.ಸುರೇಶಗೌಡ, ಜಿ.ಬಿ.ಜ್ಯೋತಿಗಣೇಶ್, ನೆಲಮಂಗಲದ ಎನ್.ಶ್ರೀನಿವಾಸ್ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net