ಮೈಸೂರು ಲೋಕಸಭೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಾಲಿ ಧನಂಜಯ್‌ ; ಕಡ್ಡಿ ಮುರಿದಂತೆ ಉತ್ತರ ಕೊಟ್ರು ಸಿಎಂ ಸಿದ್ದರಾಮಯ್ಯ

siddu
Published on

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ರಾಜಕೀಯಕ್ಕೆ ಬರುತ್ತಾರೆ. ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಣಕ್ಕಿಳಿಸುವ ಮೂಲಕ ಪ್ರಬಲ ಎದುರಾಳಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ರೂಪಿಸುತ್ತಿದೆ ಎನ್ನಲಾಗಿತ್ತು. ಈ ಕುರಿತಾಗಿ  ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಆದರೆ, ಈಗ ಚರ್ಚೆಯ ದಿಕ್ಕು ಸ್ವಲ್ಪ ಬದಲಾಗಿ ಡಾಲಿ ಧನಂಜಯ ಅವರ ಹೆಸರು ಕೇಳಿಬರುತ್ತಿದೆ. “ಬಡವರ ಮಕ್ಕಳು ಬೆಳೆಯಬೇಕು” ಎಂದು ಹೇಳಿದ್ದ ಧನಂಜಯ್‌ ಒಂದು ವೇಳೆ ಸ್ಪರ್ಧೆ ಮಾಡಿದರೆ ಪ್ರಬಲ ಎದುರಾಳಿಯಾಗಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ ಎನ್ನುವ ಸುದ್ದಿ ಹಬ್ಬಿತ್ತು.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net