ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

FB_IMG_1735291283581.jpg
Published on

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾಂಗೆ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net