ಸಂಸದ ವಿ.ಶ್ರೀನಿವಾಸಪ್ರಸಾದ್‌ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

6
Published on

ಮೈಸೂರು: ಲೋಕಸಭಾ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ಅಚ್ಚರಿಯ ಬೆಳವಣಿಗೆಯಲ್ಲಿ ಹಳೇ ದೋಸ್ತಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಗ್ಗೆ ಜಯಲಕ್ಷ್ಮೀಪುರಂನ ಸಂಸದ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಸಂಚಲನ ಸೃಷ್ಟಿಸಿದ್ದು, ಲೋಕಸಭಾ ಚುನಾವಣೆಗೆ ಪ್ರಸಾದ್ ಅವರ ಬೆಂಬಲ ಪಡೆಯುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾದರೆ ಎಂಬ ಪ್ರಶ್ನೆಯೂ ಮೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net