ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಪ್ರಕರಣ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

Parashurama Statue
Published on

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಯನ್ನು ಸಿಐಡಿ ಒಪ್ಪಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಥೀಮ್ ಪಾರ್ಕ್‌ನ ವಿಚಾರವಾಗಿ ವಾಧ್ಯಮಗಳಲ್ಲೂ ಅನೇಕ ವರದಿ ಪ್ರಕಟಗೊಂಡಿದ್ದವು. ಜಿಲ್ಲೆಯ ಕಾಂಗ್ರೆಸ್ ನಾಯಕರೂ ಆರೋಪ ಮಾಡಿದ್ದರು. ಹೀಗಾಗಿ ಸತ್ಯಾಸತ್ಯತೆ ಪರಿಶೀಲಿಸಲು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಥೀಮ್ ಪಾರ್ಕ್ ನಿರ್ವಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಂತೆ ತೋರುತ್ತಿದ್ದು, ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ೆ.2ರಂದು ಸಚಿವೆ ಪತ್ರ ಬರೆದಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆಯ ಶಿಫಾರಸಿನಂತೆ ಮುಖ್ಯಮಂತ್ರಿಗಳು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net