ಹೈಸ್ಕೂಲಿಗೆ ಹೋಗೋವರೆಗೂ ಕಾಲಲ್ಲಿ ಚಪ್ಪಲಿ ಇರಲಿಲ್ಲ ಎಂದ ಸಿದ್ದರಾಮಯ್ಯ

Siddu_Slipper
Published on

ಮಧುಗಿರಿ: ಹೈಸ್ಕೂಲಿಗೆ ಹೋಗುವವರೆಗೂ ನನ್ನ ಕಾಲಲ್ಲಿ ಚಪ್ಪಲಿ ಇರಲಿಲ್ಲ. ನನ್ನ ಪರಿಸ್ಥಿತಿ ಉಳಿದ ಮಕ್ಕಳಿಗೆ ಬರಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ಜಾರಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಮಕ್ಕಳಿಗೆ ಶೂ ಭಾಗ್ಯ ಕಾರ್ಯಕ್ರಮ ಘೋಷಣೆ ಮಾಡಿದ್ದು ಮಧುಗಿರಿಯಲ್ಲೇ. ಅವತ್ತು ರಾಜಣ್ಣ ಸರ್ಕಾರಿ ಶಾಲೆಯಲ್ಲಿನ ಮಕ್ಕಳಿಗೆ ಶೂ-ಸಾಕ್ಸ್ ನೀಡುವಂತೆ ಮನವಿ ಮಾಡಿಕೊಂಡಿದ್ದು ಹಿಂದೆ-ಮುಂದೆ ಯೋಚಿಸದೆ ಶೂ ಭಾಗ್ಯ ಘೋಷಿಸಿದ್ದೆ ಎಂದರು.

ರಾಜಣ್ಣ ಒಳ್ಳೆ ಕೆಲಸ ಮಾಡ್ತಾನೆ. ಅವರನ್ನು ರಾಜಕೀಯವಾಗಿ ಕಳೆದುಕೊಂಡರೆ ಅದು ಮಧುಗಿರಿಯ ಜನತೆಗೆ ಬಹಳ ದೊಡ್ಡ ನಷ್ಟವಾಗುತ್ತದೆ. ರಾಜಣ್ಣ ಬಡವರ ಪರವಾಗಿ ಬಹಳ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net