ಸಿಎಂ ಸಿದ್ದರಾಮಯ್ಯ ಜ.24 ರಂದು ಮೈಸೂರಿಗೆ ಭೇಟಿ

Siddaramaiah
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.24 ರಂದು ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತಾ ಶಾಲಾ ಮುಂಭಾಗದ ಮೈದಾನದಲ್ಲಿ ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿರುವ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮಾಡುವರು ಮತ್ತು ಸಾರ್ವಜನಿಕ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net