ಮಳವಳ್ಳಿಗೆ ಫೆ.17ರಂದು ಸಿಎಂ ಸಿದ್ದರಾಮಯ್ಯ ಭೇಟಿ

Siddaramaiah_0
ಸಿದ್ದರಾಮಯ್ಯ
Published on

ಮಳವಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.17ರಂದು ಪಟ್ಟಣಕ್ಕೆ ಆಗಮಿಸಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.


ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಿಎಂ ಕಾರ್ಯಕ್ರಮದ ಸಂಬಂಧ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.


ಅಂದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸರ್ಕಾರದ ಹಲವು ಸಚಿವರು ಭಾಗಿಯಾಗಲಿದ್ದಾರೆ. ಫಲಾನುಭವಿಗಳ ಸಮಾವೇಶದಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆಂದು ಮಾಹಿತಿ ನೀಡಿದರು.


ಇದರೊಂದಿಗೆ ಮಳವಳ್ಳಿ ಕ್ಷೇತ್ರ ಅಭಿವೃದ್ಧಿಯತ್ತ ಹೊಸ ದಾಪುಗಾಲು ಹಾಕಲು ಮುಖ್ಯಮಂತ್ರಿಗಳ ಈ ಕಾರ್ಯಕ್ರಮ ನಾಂದಿಯಾಗಲಿದೆ ಎಂದ ಅವರು, ಈ ಕುರಿತು ಈಗಷ್ಟೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net