ಸಿಎಂಗೆ ಮಾನ, ಮರ್ಯಾದೆ ಇಲ್ಲ

prahlad joshi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಉಡಾಫೆ ಹೇಳಿಕೆ ನೀಡುತ್ತಾರೆ. ಅವರಿಗೆ ಮಾನ, ಮರ್ಯಾದೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನಿಮಗೆ ಎಷ್ಟು ನಾಲಿಗೆ ಇದೆ ? ನಿಮ್ಮ ನಾಲಿಗೆ ಎಂಥದ್ದು ಎಂಬುದು ಇಡೀ ನಾಡಿಗೆ ಗೊತ್ತಿದೆ. ಹೀಗೆ ಲಘುವಾಗಿ ಮಾತನಾಡುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಹರಿಹಾಯ್ದರು.

ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಲೋಕಸಭೆ ಚುನಾವಣೆಯಲ್ಲಿ ಈಗಿರುವ 52 ಸ್ಥಾನಗಳು ಕಡಿಮೆ ಆಗಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಸೀಟು ಕೊಡಿ, ಮೂರು ಸೀಟು ಕೊಡಿ ಎಂದು ಟಿಎಂಸಿ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್​ಗೆ ಬಂದಿದೆ ಎಂದು ಟೀಕಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಹೆಚ್ಚು-ಕಡಿಮೆ ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಇನ್ನೂ ತೀರ್ವನವಾಗಿಲ್ಲ ಎಂದು ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net