

ಧಾರವಾಡ: ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣಕಾಸಿನ ಕೊರತೆ ಎದುರಾಗಿದೆ ಎಂದು ಬಡವರ ವಿರೋಽಗಳು ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗಿದೆ. ಪಂಚಗ್ಯಾರAಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಕೃಷಿ ವಿಶ್ವವಿದ್ಯಾಲಯವು ಆಯೋಜಿಸಲಾಗಿದ್ದ ೪ ದಿನಗಳ ಕೃಷಿ ಮೇಳವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಕೃಷಿ ಪ್ರಧಾನ ದೇಶವಾದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಹೆಚ್ಚಿರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆಯಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿಪಡಿಸಲು ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳಬೇಕು. ಜೊತೆಗೆ ಯುವಕರು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಯ ಕೈಗೊಳ್ಳಬೇಕು. ವಿಶ್ವವಿದ್ಯಾಲಯಗಳ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪುವಂತೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಕೃಷಿ ಮೇಳಗಳು ಜಾತ್ರೆಗಳಾಗದಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.
ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳನ್ನು ಮರು ಜಾರಿ ಘೋಷಿಸಲಾಗಿದೆ. ಈ ವರ್ಷದಿಂದ ರೈತರಿಗೆ ೫ ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ೧೫ ಲಕ್ಷ ರೂ.ವರೆಗೆ ಕೇವಲ ಶೇ. ೩ರ ಬಡ್ಡಿ ದರ ನಿಗದಿಗೊಳಿಸಲಾಗಿದೆ. ಈ ಭಾಗದ ರೈತರಿಗಾಗಿ ಮಹದಾಯಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಸ್ಪಂದಿಸಿ ಗೋವಾ ಸರ್ಕಾರದೊಂದಿಗೆ ಸಮಾಲೋಚಿಸಿ ಪರಿಸರ ಮತ್ತು ಅರಣ್ಯಕ್ಕೆ ಸಂಬAಽಸಿದ ತರಕಾರುಗಳನ್ನು ಬಗೆಹರಿಸಿದರೆ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಕ್ಕೆ ತಕ್ಷಣ ಕ್ರಮ ವಹಿಸಲಿದೆ ಎಂದರು.
ವಿಶ್ವವಿದ್ಯಾಲಯ ಪ್ರಕಟಿಸಿದ ವಿಶೇಷ ಪ್ರಕಟಣೆಗಳನ್ನು ಗಣ್ಯರು ಬಿಡುಗಡೆ ಮಾಡಿದರು. ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೃಷಿ ಸಚಿವ ಎನ್. ಚೆಲುರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬಸವರಾಜ ಶಿವಣ್ಣನವರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ, ಇಲಾಖೆ ಆಯುಕ್ತ ವೈ.ಎಸ್. ಪಾಟೀಲ, ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ, ಜಿ.ಪಂ. ಸಿಇಒ ಸ್ವರೂಪ ಟಿ.ಕೆ., ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರು, ಅಽಕಾರಿಗಳು ವೇದಿಕೆಯಲ್ಲಿದ್ದರು.