ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ

BOMMAI
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಮುಸ್ಲಿಮ್​ಗೆ ಕಲ್ಪಿಸಲಾಗಿದ್ದ ಶೇ. 4ರಷ್ಟು ಮೀಸಲಾತಿ ರದ್ದು ಮಾಡಿರುವ ವಿಚಾರಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೀಸಲಾತಿ ರದ್ದು ಮಾಡಿರುವ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ. ಮುಂದಿನ ವಿಚಾರಣೆ ಆಗುವವರೆಗೂ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದ್ದೇವೆ. ಇಂದಿನ ಕಾಂಗ್ರೆಸ್ ಸರ್ಕಾರ ಹೇಗೆ ಮುಂದುವರಿಸುತ್ತದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ ಎಂದು ಹೇಳಿದರು.

ಸಂವಿಧಾನದಲ್ಲಿ ಧರ್ವಧಾರಿತ ಮೀಸಲಾತಿ ಇಲ್ಲ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಇದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆದಾಗ್ಯೂ ಕೂಡಾ ಸುಮಾರು ಮುಸ್ಲಿಂ ಸಮುದಾಯಗಳು 2ಎ ಮೀಸಲಾತಿ ಪಟ್ಟಿಯಲ್ಲಿವೆ. ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಪುರಸ್ಕಾರ ಸಿಕ್ಕಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net