ಬೆಳಗಾವಿಗೆ ಆಗಮಿಸಿದ ಸಿಎಂ; ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರಿಗೆ ಸ್ವಾಗತ

IMG-20230811-WA0009.jpg
Published on

ಬೆಳಗಾವಿ:ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಶುಕ್ರವಾರ ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಬರಮಾಡಿಕೊಂಡರು.
ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಕೊಕಟನೂರ ಪಶುವೈದ್ಯಕೀಯ ಕಾಲೇಜು ಅನಾವರಣಗೊಳಿಸಲಿದ್ದಾರೆ.
ಕೊಕಟನೂರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net