ಗುತ್ತಿಗೆದಾರ ಸಂತೋಷ ಪಾಟೀಲ ಸಾವು‌ ಮರು ತನಿಖೆ; ಸಿಎಂ ಸಿದ್ದರಾಮಯ್ಯ ಭರವಸೆ

IMG-20230811-WA0007.jpg
Published on


ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಸಾವು ‌ಪ್ರಕರಣ ಕುರಿತು ಕಾನೂನು ಇಲಾಖೆ ಜತೆ ಚರ್ಚಿಸಿ‌ ಮರು ತನಿಖೆಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ಸಾಂಬ್ರಾ ವಿಮಾನ‌ನಿಲ್ದಾಣದಲ್ಲಿ ಶುಕ್ರವಾರ ಮೃತ ಗುತ್ತಿಗೆದಾರ ಸಂತೋಷ ಪಾಟೀಲ ತಾಯಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮೃತ ಸಂತೋಷ ತಾಯಿ ಪಾರ್ವತಿ ಮಾತನಾಡಿ, ಹಿಂದಿನ ಸರ್ಕಾರ ಸರಿಯಾಗಿ ತನಿಖೆ ಮಾಡಿಲ್ಲ ಸಿಐಡಿಗೆ ತನಿಖೆ ಕೊಡುವಂತೆ ಮನವಿ ಮಾಡಿದ್ದೇವೆ‌.ಸಿಎಂ ಅವರು ತನಿಖೆ ಮಾಡಿಸುತ್ತೇವೆ ಅಂತಾ ಭರವಸೆ ಕೊಟ್ಟಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net