ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ; 1ಲಕ್ಷ ಜನರು ಭಾಗಿ

Screenshot_20230811_191019_Facebook.jpg
Published on

ಬೆಳಗಾವಿ:ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.28 ಅಥವಾ 30ಚಾಲನೆ ನೀಡಲಾಗುವುದು. ಬೆಳಗಾವಿ ವಿಭಾಗೀಯ‌ ಮಟ್ಟದ 7 ಜಿಲ್ಲೆಗಳಿಂದ 1ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶುಕ್ರವಾರ ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಕುರಿತು ಸಿಪಿಎಡ್ ಹಾಗೂ ಜಿಲ್ಲಾ ಕ್ರೀಡಾಂಗಣ ಸ್ಥಳ ಪರಿಶೀಲನೆ ನಡೆಸಿ ಸುದ್ಸಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ ಹಾಗೂ ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆ ಚಾಲನೆ ನೀಡಲಾಗಿದೆ. ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ ಗಾಂಧಿ ಚಾಲನೆ ನೀಡಲಿದ್ದಾರೆ. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net