

ಬೆಳಗಾವಿ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ ಆ.೧೧ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ.೧೧ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಬೆಳಗ್ಗೆ ೧೧.೧೫ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮಧ್ಯಾಹ್ನ ೧೨ ಗಂಟೆಗೆ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಬಳಿಕ ೧೨.೫೦ಕ್ಕೆ ಅಥಣಿ ತಾಲೂಕಿನ ಕೊಕಟನೂರ ಪಶುವೈದ್ಯಕೀಯ ಕಾಲೇಜು ಅನಾವರಣಗೊಳಿಸಲಿದ್ದಾರೆ.
ಕೊಕಟನೂರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ತದನಂತರ ಸಂಜೆ ೪.೩೦ಕ್ಕೆ ವಿಶೇಷ ಹೆಲಿಪ್ಯಾಡ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಸಂಜೆ ೫.೩೦ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷಿ÷್ಮÃ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಭಾಗವಹಿಸಲಿದ್ದಾರೆ.