

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೈದ್ರಾಬಾದ್‌ದಿಂದ ವಿಶೇಷ ವಿಮಾನದ ಮೂಲಕ ಇಂದು ಸೆ. ೧೭ ರಂದು ಬೆಳಿಗ್ಗೆ ೮.೧೫ ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ೮.೩೦ ಗಂಟೆಗೆ ನಗರದ ಎಸ್‌ವಿಪಿ ವೃತ್ತದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ೯ ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕ ಕಾರ್ಯಕ್ರಮ ಹಾಗೂ ಹೆಲ್ತ್ ಎಟಿಎಂ ಉದ್ಘಾಟಿಸುವರು. ನಂತರ ಹೈಕೋರ್ಟ್ ಹತ್ತಿರದಲ್ಲಿ ನಿರ್ಮಿಸಲಾಗಿರುವ ಶಾಂತಾ ಆಸ್ಪತ್ರೆಯನ್ನು ಉದ್ಘಾಟಿಸಿ ಮಧ್ಯಾಹ್ನ ೩ ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.