ಸಿಎಂ ರಿಂದ ಮಾಡಾಳ್ ವಿರೂಪಾಕ್ಷಪ್ಪ ರಕ್ಷಣೆ: ಆರ್.ಧ್ರುವನಾರಾಯಣ

Dhruvanarayana vvani
Published on

ಮೈಸೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಸವರಾಜ ಬೊಮ್ಮಾಯಿ ರಕ್ಷಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ನೈತಿಕತೆ ಇದ್ದಿದ್ದರೆ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದರು.

ಲೋಕಾಯುಕ್ತ ಮುಚ್ಚಿದ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇರುವುದರಿಂದಲೇ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿಲ್ಲ ಎಂದು ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net