ಆ.11ರಂದು ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ: ಡಿಸಿ ಎಸ್.ಅಶ್ವಥಿ ಮಾಹಿತಿ

Dc Meeiting
Published on

ಮಂಡ್ಯ: ಜಿಲ್ಲೆಯಲ್ಲಿ ಜೀವನೋಪಾಯ ವರ್ಷಾಚರಣೆಯ ಉದ್ಘಾಟನಾ ಸಮಾರಂಭವು ಆ.11ರಂದು ನಡೆಯಲಿದೆ. ಕಾರ್ಯಕ್ರ ಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವಥಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷೆತೆ ವಹಿಸಿ ಮಾತನಾಡಿದರು. ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಜೀವನೋಪಾಯ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈಗಾಗಲೇ ಎನ್.ಆರ್.ಎಲ್.ಎಂ ಹಾಗೂ ಎನ್ ಯು.ಐಲ್. ಎಂ ಸ್ವಸಹಾಯ ಸಂಘಗಳು ವಿವಿಧ ರೀತಿಯ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಮಾರಾಟ ವ್ಯವಸ್ಥೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವೇದಿಕೆಗಳನ್ನು ಮಾಡಿಕೊಟ್ಟಿದೆ ಎಂದರು.
ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಬೇಕಿರುವ ಬಾವುಟಗಳನ್ನು ಸ್ವ ಸಹಾಯ ಸಂಘಗಳು ಸಿದ್ಧಪಡಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಿ ಜೀವನೋಪಾಯ ವರ್ಷ ಉದ್ಘಾಟಿಸುತ್ತಿರುವುದು ಸಂತೋಷದ ವಿಷಯವಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ವೇದಿಕೆಯಲ್ಲಿ ಎನ್.ಆರ್.ಎಲ್.ಎಂ ಹಾಗೂ ಎನ್ ಯು.ಐಲ್.ಎಂ ಸ್ವಸಹಾಯ ಸಂಘಗಳು ತಯಾರಿಸಿ ಮಾರಾಟ ಮಾಡುತ್ತಿರುವ ಉತ್ತಮ ಉತ್ಪನ್ನಗಳನ್ನು ಪ್ರದರ್ಶಿಸಲಾಗುವುದು. ಇದು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಇಚ್ಛಿಸುವ ಮಹಿಳೆಯರಿಗೆ ಉತ್ತಮ ವೇದಿಕೆಯಾಗಲಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ ಸಿಇಒ ಶಾಂತಾ ಎಂ. ಹುಲ್ಮನಿ, ಉಪವಿಭಾಗಾಧಿಕಾರಿ ಐಶ್ವರ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net