ಶಿಗ್ಗಾಂವಿ- ಸವಣೂರಿಗೆ ಸಿಎಂ ಇಂದು

_DSC5997
Published on

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.20ರಂದು ಶಿಗ್ಗಾಂವಿ- ಸವಣೂರ ಪ್ರವಾಸ ಹಮ್ಮಿಕೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5.45ಕ್ಕೆ ಶಿಗ್ಗಾಂವಿ ತಾಲೂಕಿನ ಹನುಮರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಸವಣೂರ ಕೃಷ್ಣಾ ನಗರದ ಜಿ ಪ್ಲಸ್ ಒನ್ ಮನೆಗಳನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ, ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಕೈಗಾರಿಕಾ ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9 ಗಂಟೆಗೆ ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮ ನಾಟಕದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net