ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

IMG-20220411-WA0013
Published on

ಉಡುಪಿ : ಸಂವಿಧಾನಬದ್ಧವಾಗಿ ರಚನೆಯಾದ ಸರ್ಕಾರಕ್ಕೆ ಎಲ್ಲರೂ ಸಮಾನ. ಧರ್ಮ ಪ್ರಚಾರಕ್ಕೆ ತೊಂದರೆ ಇಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಹಿಂಸೆಗಿಳಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.  ಈ ಬಗ್ಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆದಿಉಡುಪಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಾತನಾಡುವುದಕ್ಕಿಂತ ಕೆಲಸ ಮಾತನಾಡಬೇಕು. ಕಾನೂನು ಪ್ರಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಕೊಲೆ ಆರೋಪ ಹೊತ್ತ ಸಂಸ್ಥೆಗಳ ಕೇಸ್ ಹಿಂಪಡೆದ ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಿಲ್ಲ. ಈ ಸಂದರ್ಭದಲ್ಲಿ ಅವರ ಕರ್ತವ್ಯಪ್ರಜ್ಞೆ ಎಲ್ಲಿತ್ತು. ನಮಗೆ ಗೊತ್ತಿದೆ ಕರ್ನಾಟಕ ಪ್ರಗತಿಪರ ರಾಜ್ಯ. ಇಲ್ಲಿನ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net