ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಚಿವ ಕೋಟ ಶ್ರೀನಿವಾಸ ಪೂಜಾರಿ

IMG_6113
Published on

ಶಿವಮೊಗ್ಗ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ವಿಚಾರವನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳಲಿದ್ದು ಅಭಿವೃದ್ಧಿ ಕೆಲಸಗಳು ಮತ್ತು ಕರೊನಾ ನಿಯಂತ್ರಣದ ಬಗ್ಗೆ ಮಾತ್ರ ನಾವು ಗಮನ ಹರಿಸುತ್ತಿದ್ದೇವೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಿಎಂ ಬದಲಾವಣೆ ಕುರಿತು ಎದ್ದಿರುವ ವಿವಾದವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೋಡಿಕೊಳ್ಳುವರು ಎಂದು ನಗರದ ಡಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಕರೊನಾ ನಡುವೆಯೂ ಸಿಎಂ ಉತ್ತಮ ಆಡಳಿತ ಕೊಟ್ಟಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಬಡವರ ನಾಡಿಮಿಡಿತ ಅರಿತಿದ್ದು ಪಕ್ಷವನ್ನು ಕಟ್ಟಿದ ಧೀಮಂತ ನಾಯಕರಾಗಿದ್ದಾರೆ. ಸಿಎಂ ಬದಲಾವಣೆ ಮಾಡುತ್ತಾರೆಂಬ ಮಾಹಿತಿ ನನಗಿಲ್ಲ ಎಂದು ಹೇಳಿದರು.

ಮಠಾಧೀಶರು ಸಿಎಂ ಬದಲಾವಣೆ ಮಾಡದಂತೆ ಒತ್ತಡ ಹೇರುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಯಾರ ಪರವಾಗಿ ಬೇಕಾದರೂ ಮಾತನಾಡಬಹುದು. ಅದೆಲ್ಲವನ್ನೂ ಹೈಕಮಾಂಡ್ ಗಮನಿಸಲಿದೆ. ಅಂತಿಮ ನಿರ್ಧಾರವನ್ನು ಪಕ್ಷ ಕೈಗೊಳ್ಳಲಿದ್ದು ಅದಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net