

ಚಿಕ್ಕಮಗಳೂರು: ಅಯೋಧ್ಯೆ ಶ್ರೀರಾಮ ಮಂದಿರದ ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಗೊಂದಲದಿಂದ ಎಡಬಿಡಂಗಿ ಹೇಳಿಕೆ ನೀಡಿ ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯದ ಹೆಸರಲ್ಲಿ ಭಾರತ್ ಜೊಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ದೇಶದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಯಾತ್ರೆಗೆ ತಡೆಯೊಡ್ಡಲಾಗಿದೆ. ಇದನ್ನು ನೆಪವಾಗಿಟ್ಟುಕೊಂಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರ ಹೇಗೆ ನಡೆಸಿಕೊಂಡಿವೆ ಎಂಬುದನ್ನು ಕಾಂಗ್ರೆಸ್ಸಿಗರು ಅರಿತುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಟಿ.ರಾಜಶೇಖರ್, ಬಿಜೆಪಿ ಮುಖಂಡರಾದ ಮಧುಕುಮಾರ್ ರಾಜ್ ಅರಸ್, ಮಂಜುನಾಥ್, ಹಿರೇಮಗಳೂರು ಪುಟ್ಟಸ್ವಾಮಿ, ದಿನೇಶ್, ಸಚಿನ್ ಉಪಸ್ಥಿತರಿದ್ದರು.