ಸಿಎಂ ಹೇಳಿಕೆ ಆಧಾರ ರಹಿತ, ಅಸಹ್ಯಕರ

New Tenginakayi mahesh New
Published on

ಹುಬ್ಬಳ್ಳಿ : ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ನೀಡಿ ಬಿಜೆಪಿಯವರು ಖರೀದಿಸಲು ಮುಂದಾಗಿದ್ದಾರೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಆಧಾರ ರಹಿತ ಹಾಗೂ ಅಸಹ್ಯಕರ ಎಂದು ಶಾಸಕ ಮಹೇಶ ಟೆಂಗಿನಕಾಯಿ ಟೀಕಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಈಗಾಗಲೇ ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ. ಬರುವ ದಿನಗಳಲ್ಲಿ ಇಡಿ ತನಿಖೆ ಭಯದಲ್ಲಿ ದಿನ ಕಳೆಯುತ್ತಿದ್ದಾರೆ. ಹೀಗಾಗಿ, ಏನೇನೋ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನ್ನನ್ನು ಮುಟ್ಟಿದರೆ ಕಾಂಗ್ರೆಸ್ ಮುಗಿಸಿದ ಹಾಗೆ ಎಂಬ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಅವರು ಸಹಾನುಭೂತಿ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಶಾಸಕರನ್ನು ಖರೀದಿ ಮಾಡಲು ಅವರೇನು ಚನ್ನಪಟ್ಟಣದ ಗೊಂಬೆಗಳೇ ಸಿದ್ದರಾಮಯ್ಯನವರೇ ಎಂದು ಶಾಸಕ ಟೆಂಗಿನಕಾಯಿ ಪ್ರಶ್ನಿಸಿದ್ದಾರೆ.

ತಾವು ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕಾಗಿತ್ತು. ಅದನ್ನೆಲ್ಲ ಬಿಟ್ಟು ಬೆಳಗಾಗುವುದರಲ್ಲಿ ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವುದು ನಿಮಗೆ ಶೋಭೆ ತರುವಂತದ್ದಲ್ಲ. ಮುಖ್ಯಮಂತ್ರಿ ಅವರು ಮುಡಾ ಹಗರಣ ಮುಚ್ಚಿ ಹಾಕಲು ನಿತ್ಯ ಪ್ರಯತ್ನಿಸುತ್ತಿರುವುದು ಮೇಲೊ್ನೕಟಕ್ಕೆ ಎದ್ದು ಕಾಣುತ್ತಿದೆ. ಇತಿ್ತೕಚೆಗೆ ವಕ್ಪ್ ಬೋರ್ಡ್ ವಿಷಯವನ್ನು ಕೆದಕಿ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾಯಿತು. ಈ ರೀತಿ ಸರ್ಕಾರದಲ್ಲಿ ವಿಚಿತ್ರ ಸಂಗತಿಗಳು ನಡೆಯುತ್ತಿವೆ ಎಂದು ಟೆಂಗಿನಕಾಯಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net