ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗೆ ಆಗ್ರಹಿಸಿ ಸತ್ಯಾಗ್ರಹ

CNC
Published on

ಮಡಿಕೇರಿ:

ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಕೊಡವ ಕ್ವೆಸ್ಟ್ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2ನೇ ರಾಜ್ಯಗಳ ಮರು-ಸಂಘಟನೆ ಆಯೋಗ ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಹಿರಿಯ ಆರ್ಥ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವಂತೆ 2ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗೆ ಕ್ರಮ ಕೈಗೊಳ್ಳಬೇಕು. ಕೊಡವರ ಹಿತಾಸಕ್ತಿ ರಕ್ಷಿಸಲು ಸಂವಿಧಾನದ 7 ನೇ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾದ ರಾಜ್ಯಗಳ ಮರು-ಸಂಘಟನೆ ಕಾಯಿದೆ 1956 ರ ಅಂಡರ್ ಟೇಕಿಂಗ್ ಗಳಿಗೆ ರಾಜ್ಯವು ಬದ್ಧವಾಗಿಲ್ಲ. ಅವಿಭಾಜ್ಯ ಮತ್ತು ಸಾಂಪ್ರದಾಯಿಕ ತಾಯ್ನಾಡು ಭಾಗ "ಸಿ" ಕೂರ್ಗ್ ರಾಜ್ಯವು 1956 ರ ನವೆಂಬರ್ 1 ರಂದು ಈಗ ಕರ್ನಾಟಕ ರಾಜ್ಯವಾಗಿರುವ ಅಂದಿನ ವಿಶಾಲ ಮೈಸೂರಿನಲ್ಲಿ ವಿಲೀನವಾದಾಗಿನಿಂದಲೂ ಕೊಡವರನ್ನು 2ನೇ ದರ್ಜೆಯ ನಾಗರೀಕರಂತೆ ಪರಿಗಣಿಸಲಾಗಿದೆ. ಇದು ಗಂಭೀರವಾದ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ.

ಕೊಡವರು ಕೊಡವ ಪ್ರದೇಶದ ಮೂಲನಿವಾಸಿ ಸ್ಥಳೀಯ ಬುಡಕಟ್ಟು ಜನರಾಗಿರುವುದರಿಂದ, ಆಂತರಿಕ ರಾಜಕೀಯ-ಸ್ವಯಂ-ನಿರ್ಣಯ ಹಕ್ಕುಗಳು, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಇತರ ನ್ಯಾಯಸಮ್ಮತವಾದ ಜನಾಂಗೀಯ ಸಮಸ್ಯೆಗಳ ಪ್ರಮುಖ ಆಕಾಂಕ್ಷೆಗಳು ಮತ್ತು ಗೌರವಾನ್ವಿತ ಗುರಿಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಕಲಿಯಂಡ ಮೀನಾ, ಚೋಳಪಂಡ ಜ್ಯೋತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ, ಪಟ್ಟಮಾಡ ಕುಶ, ಕಿರಿಯಮಾಡ ಶೆರಿನ್, ಮಂದಪAಡ ಮನೋಜ್, ಮಣೋಟೀರ ಚಿಣ್ಣಪ್ಪ, ಪುಲ್ಲೇರ ಕಾಳಪ್ಪ, ಚಂಙAಡ ಚಾಮಿ, ಪುಟ್ಟಿಚಂಡ ದೇವಯ್ಯ, ಪುದಿಯೊಕ್ಕಡ ಕಾಶಿ, ನಂದಿನೆರವAಡ ಅಪ್ಪಯ್ಯ, ನಂದಿನೆರವAಡ ಅಯ್ಯಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net