

ಮಡಿಕೇರಿ:
ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ನಡೆಸಲಾಯಿತು.
ಈ ಸಂಬAಧದ ಮನವಿಯನ್ನು ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಕಾನೂನು ಮಂತ್ರಿ, ಭಾರತ ಮುಖ್ಯ ಚುನಾವಣಾ ಆಯುಕ್ತರು, ವಿಶ್ವದ ವಿಖ್ಯಾತ ಆರ್ಥಿಕ ತಜ್ಞ ಡಾ.ಸುಬ್ರಮಣ್ಯನ್ ಸ್ವಾಮಿ, ವಿಶ್ವ ರಾಷ್ಟç ಸಂಸ್ಥೆಯ ಮಹಾ ಕಾರ್ಯದರ್ಶಿ, ಕರ್ನಾಟಕದ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಚುನಾವಣಾ ಆಯುಕ್ತರಿಗೆ ಕೊಡಗು ಜಿಲ್ಲಾಡಳಿತ ಮೂಲಕ ಸಲ್ಲಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮನವಿ ಪತ್ರ ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಸಿಎನ್‌ಸಿ ಮುಖಂಡ ಎನ್.ಯು. ನಾಚಪ್ಪ, 2026ರಲ್ಲಿ ಸಂಸತ್ತಿನ ಮತ್ತು ಅಸೆಂಬ್ಲಿಯ ಕ್ಷೇತ್ರದ ಗಡಿ ಮತ್ತು ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತದೆ. ಇದಕ್ಕಾಗಿ ಪ್ರಕ್ರಿಯೆ ಪ್ರಾರಂಭವಾಗಿದೆ. ಇದರ ದುರ್ಲಾಭವನ್ನು ಪಡೆದುಕೊಂಡು ಮೌನವಾಗಿ ರಹಸ್ಯವಾಗಿ ಮತ್ತು ಮೋಸದಿಂದ ಕೊಡವ ವಿರೋಧಿಗಳು ಆದಿಮಸಂಜಾತ ಕೊಡವರನ್ನು ಹಣಿದು ಅಂಚಿಗೆ ಹಾಕಲು ಸಂಚು ಹೂಡುತ್ತಿದ್ದಾರೆ. ರಾಜ್ಯದಲ್ಲಿ ಗರಿಷ್ಟ ಪ್ರಾತಿನಿಧ್ಯವನ್ನು ಹೊಂದಿರುವ ಜನಸಂಖ್ಯಾ ಪ್ರಾಬಲ್ಯದ ಕೂಟ ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನು ನಿರ್ಮಿಸುವ ನೆಪದಲ್ಲಿ ಸುಳ್ಯ ತಾಲೂಕನ್ನು ಕೊಡಗಿಗೆ ಸೇರಿಸಿ ಪ್ರತ್ಯೇಕ ಕೊಡಗು ಲೋಕಸಭಾ ಕ್ಷೇತ್ರ ನಿರ್ಮಿಸಿ ಶಾಶ್ವತವಾಗಿ ತಾವು ಸಂಸತ್ ಪ್ರಾತಿನಿಧ್ಯ ಪಡೆಯುವುದರೊಂದಿಗೆ ಕೊಡವರಿಗೆ ಪ್ರಾತಿನಿಧ್ಯ ಸಂಸತ್ತಿನಲ್ಲಿ ದಕ್ಕದಂತೆ ಒಳಸಂಚು ರೂಪಿಸಲಾಗುತ್ತಿದೆ.
ತುಳುವಗೌಡರ ದಟ್ಟವಾದ ಜನಸಂಖ್ಯಾ ಉಪಸ್ಥಿತಿ ಇರುವ ಸುಳ್ಯ ತಾಲೂಕನ್ನು ಸೇರಿಸುವ ಮೂಲಕ ತಮ್ಮದೇ ಶಾಶ್ವತ ಮತ ಕ್ಷೇತ್ರ ಹೊಂದಲು ಹೊಂಚುಹಾಕುವುದರ ಮೂಲಕ ಇದಕ್ಕೆ ದಾರಿ ಮಾಡಿಕೊಡಲಾಗುತ್ತಿದೆ.
ಈಗಾಗಲೇ ರಾಜ್ಯದ ತಮ್ಮ ಜನಾಂಗದ ಪ್ರತಿರೂಪಿ ಬಲಾಢ್ಯ ಸಮುದಾಯದ ಪ್ರಬಲ ರಾಜಕೀಯ ಬೆಂಬಲದೊAದಿಗೆ ರಾಜಕೀಯ ಲಾಬಿಯ ಸಹಾಯದ ಮೂಲಕ ಹೊಸದಿಲ್ಲಿಯಲ್ಲಿ ಅಧಿಕಾರ ಕೇಂದ್ರಗಳನ್ನು ಸಂಪರ್ಕಿಸಿ ಸಂಸತ್ ಸ್ಥಾನವನ್ನು ಕ್ಷೇತ್ರ ಮರು ಹೊಂದಾಣಿಕೆ ಮತ್ತು ಅದರ ಗಡಿ ಬದಲಾಯಿಸುವ ಮೂಲಕ ಅವರ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸುವ ಸಲುವಾಗಿ ಸುಳ್ಯವನ್ನು ಮಾತ್ರ ಸೇರಿಸುವ ಮೂಲಕ ಕೊಡಗು ಪ್ರತ್ಯೇಕ ಲೋಕಸಭೆ ಕ್ಷೇತ್ರ ಸೃಷ್ಟಿಸುವ ಹುನ್ನಾರ ನಡೆದಿದೆ. ಒಮ್ಮೆ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ ಜಾರಿಗೆ ಬಂದ ನಂತರ ಕೊಡವರಿಗೆ ಆಗಿರುವ ಅನ್ಯಾಯವನ್ನು ನ್ಯಾಯಾಲಯದ ಮೂಲಕ ಪ್ರಶ್ನಿಸುವಂತಿಲ್ಲ ಎಂದಿದ್ದಾರೆ.
ಕಲಿಯಂಡ ಮೀನಾ ಕಾರ್ಯಪ್ಪ, ರೇಖಾ ನಾಚಪ್ಪ, ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಾಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಕಾಂಡೇರ ಸುರೇಶ್, ಅಜ್ಜಿಕುಟ್ಟೀರ ಲೋಕೇಶ್, ಅರೆಯಡ ಗಿರೀಶ್, ಬೊಟ್ಟಂಗಡ ಗಿರೀಶ್ ಮತ್ತಿತರರು ಈ ಸಂದರ್ಭ ಇದ್ದರು.