ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ

cnc
Published on

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಹಿರಿಯರಿಗೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.

ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು. ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್‌ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.

ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು. ಕೊಡವ ಸಾಂಪ್ರದಾಯಿಕ ಸಂಸ್ಕಾರ ಗನ್ ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊಂಡು ಕಳೆದ ಅನೇಕ ವರ್ಷಗಳಿಂದ ಸಿಎನ್‌ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಈ ಹಕ್ಕುಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರೇಖಾ ನಾಚಪ್ಪ, ಅಳ್ಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಮಂದಪಂಡ ಮನೋಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net