ದೇವಟ್ ಪರಂಬುವಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಸಿಎನ್‌ಸಿ

cnc pushpanamana
Published on

ಮಡಿಕೇರಿ: ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪ್ರಮುಖರು ಶ್ರದ್ಧಾಂಜಲಿ ಸಲ್ಲಿಸಿತು.


ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.

ನಂತರ ಮಾತನಾಡಿದ ಎನ್.ಯು.ನಾಚಪ್ಪ, ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ಕಲ್ಪಿಸಬೇಕು. ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು. ಸಂವಿಧಾನದ ೨೫ ಮತ್ತು ೨೬ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ ಸಂಸ್ಕಾರ ಗನ್ ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊಂಡು ಕಳೆದ ಅನೇಕ ವರ್ಷಗಳಿಂದ ಸಿಎನ್‌ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಈ ಬೇಡಿಕೆಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು.


ಈ ಸಂದರ್ಭದಲ್ಲಿ ಪಟ್ಟಮಾಡ ಕುಶ ಹಾಗೂ ಮಂದಪಂಡ ಮನೋಜ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net