ಗುತ್ತಿಗೆದಾರರ ಬೇಡಿಕೆ ಈಡೇರಿಕೆಗಾಗಿ ಮುಷ್ಕರ 31ರಂದು

WhatsApp Image 2024-07-23 at 10.30.34 AM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಗುತ್ತಿಗೆದಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜು. 31ರಂದು ಪ್ರತಿಭಟನೆ ನಡೆಸಲು ನಗರದಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಸ ಪಾಟೀಲ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಸರ್ಕಾರ ಗಮನ ಹರಿಸಿಲ್ಲ. ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಸೇರಿ ಹಲವು ಬೇಡಿಕೆಗಳು ನನೆಗುದಿಗೆ ಬಿದ್ದಿವೆ. ಇದನ್ನು ಖಂಡಿಸಿ 31ರಂದು 10 ಗಂಟೆಗೆ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಅಲ್ಲಿಂದ ಜ್ಯುಬಿಲಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಽಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬಳಿಕ ಮುಖ್ಯ ಇಂಜಿನಿಯರ್ ಕಚೇರಿ ಎದುರು ದಿನವಿಡೀ ಮುಷ್ಕರ ನಡೆಸಲಾಗುವುದು. ಸುಮಾರು 500ಕ್ಕೂ ಹೆಚ್ಚು ಗುತ್ತಿಗೆದಾರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುಭಾಸ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net