ಸೋಮವಾರಪೇಟೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆ ನ.22ರಂದು ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ಸರ್ಕಾರದಿಂದ ಮಾನ್ಯತೆ ಹೊಂದಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಭಾಗವಹಿಸಬಹುದು. ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಭಾಗವಹಿಸಬಹುದು.. ಪ್ರಥಮ ಸ್ಥಾನ ಪಡೆದವರು ಮುಂದಿನ ಹಂತಕ್ಕೆ ಆಯ್ಕೆಯಾಗಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನೊಡೆಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ ಮೊ: 9880099601 ಸಂಪರ್ಕಿಸಬಹುದು.