ಗೊಬ್ಬರ ಮಾರಾಟ ಕೇಂದ್ರ ಶೀಘ್ರ ಆರಂಭ

2_Saligrama Society Meeting
Published on

ಸಾಲಿಗ್ರಾಮ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗೊಬ್ಬರ ಮಾರಾಟ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಸಂಘದ ಅಧ್ಯಕ್ಷ ಸತೀಶ್ ಹೇಳಿದರು.

ಅವರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024 - 25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ಸಂಘಗಳು ಅಭಿವೃದ್ಧಿಯಾಗಬೇಕಾದರೆ ಸಂಘದ ಸದಸ್ಯರ ಸಹಕಾರ ಅತ್ಯಗತ್ಯ ಎಂದರು.ಸಂಘದಿಂದ 2024 - 25ನೇ ಸಾಲಿನಲ್ಲಿ ರೈತರಿಗೆ ಒಟ್ಟು 4 ಕೋಟಿ ರೂ. ಕೆ.ಸಿ.ಸಿ. ಸಾಲ ನೀಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಸಂಘವು 87 ಸಾವಿರ ರೂ. ನಿವ್ವಳ ಲಾಭಗಳಿಸಿದೆ ಎಂದರು.

ಮುಡಾ ಮಾಜಿ ಅಧ್ಯಕ್ಷ ಹರದನಹಳ್ಳಿ ವಿಜಯ್, ಎಪಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ್, ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಎನ್.ದಿನೇಶ್, ಸಂಘದ ಉಪಾಧ್ಯಕ್ಷ ಎಸ್.ಬಿ.ಮಂಜುನಾಥ, ನಿರ್ದೇಶಕರಾದ ಎಸ್.ಬಿ.ಅಶೋಕ, ನಾಗೇಂದ್ರ, ಕರುಣ್ ಕುಮಾರ್, ಚಂದ್ರನಾಯಕ, ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್, ಮಾಜಿ ಉಪಾಧ್ಯಕ್ಷೆ ಸುಧಾ ರೇವಣ್ಣ, ಸದಸ್ಯರಾದ ಲೋಕೇಶ್, ಹರೀಶ್, ರೈತ ಸಂಘದ ಉಪಾಧ್ಯಕ್ಷ ಕೆಂಪಣ್ಣ, ಮುಖಂಡರಾದ ಬೊಮ್ಮರಾಯಿಗೌಡ, ಸಾ.ರಾ.ಸತೀಶ್, ಮಹೇಂದ್ರ, ಸಂಘದ ಸಿಇಒ ಸುರೇಶ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net