

ಮಡಿಕೇರಿ: ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಡಿಕೇರಿ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನ೧೪ರಿಂದ ನ೨೦ರವರೆಗೆ ಜಿಲ್ಲೆಯ ವಿವಿಧೆಡೆ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ ತಿಳಿಸಿದರು.
ನ೧೪ರಂದು ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಿದ್ದಾಪುರದಲ್ಲಿ ನಡೆಯಲಿದೆ. ನ೧೫ರಂದು ಚೌಡ್ಲು ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ನಡೆದರೆ, ನ೧೭ರಂದು ಅರಪಟ್ಟು ಸಹಕಾರ ದವಸ ಭಂಡಾರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ನ ೧೮ ರಂದು ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದರೆ, ನ೧೯ರಂದು ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆಯಲಿದೆ. ನ೨೦ರಂದು ಗರ್ವಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಭಾರತಿಯ ರಾಜ್ಯ ಉಪಾಧ್ಯಕ್ಷ ಎನ್.ಎ.ರವಿ ಬಸಪ್ಪ ಮಾತನಾಡಿ, ನ೧೬ರಂದು ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ನಗರದ ಹೊಟೇಲ್ ರಾಜ್‌ದರ್ಶನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ವಹಿಸಲಿದ್ದಾರೆ. ಅತಿಥಿಗಳಾಗಿ ಪ್ರಮುಖರಾದ ಕೆ.ಪಿ.ಗಣಗತಿ, ಬಿ.ಎ.ಚಂಗಪ್ಪ, ಕೆ.ಎಸ್.ಹರೀಶ್ ಪೂವಯ್ಯ, ಪಿ.ಸಿ.ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಯೂನಿಯನ್‌ನ ನಿದೇರ್ಶಕರಾದ ಕೆ.ಎ.ಸಂಪತ್, ಎನ್.ಎಂ.ಉಮೇಶ್ ಉತ್ತಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.