ಸಹಕಾರ ಆಂದೋಲನ ಉಪನ್ಯಾಸ

Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ದಿ. ಮರಿಗೌಡ ಫಕ್ಕೀರಗೌಡ ಪಾಟೀಲ ದತ್ತಿ ಅಂಗವಾಗಿ ಜ. 17ರಂದು ಸಂಜೆ 6 ಗಂಟೆಗೆ ಸಂಘದ ಶ್ರೀ ರಾ.ಹ. ದೇಶಪಾಂಡೆ ಸಭಾಭವನದಲ್ಲಿ `ಸಹಕಾರ ಆಂದೋಲನ' ಕುರಿತು ಉಪನ್ಯಾಸ ಏರ್ಪಡಿಸಿದೆ. ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಸಿ.ಸಿ. ಪಾಟೀಲ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ ಹಾಗೂ ಬೆಂಗಳೂರಿನ ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳದ ಜಿ.ಪಿ. ಪಾಟೀಲ ಅತಿಥಿಗಳಾಗಿ ಪಾಲ್ಗೊಳ್ಳುವರು. ಧಾರವಾಡ ಸಿಟಿಸಿ ನಿವೃತ್ತ ಪ್ರಾಚಾರ್ಯ ಬಿ.ಎಲ್. ಶಿವಳ್ಳಿ ಉಪನ್ಯಾಸಕ ನೀಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net