ಆ.6ರಂದು ಪೊಲೀಸ್ ಸಹಕಾರ ಸಂಘಕ್ಕೆ ಚುನಾವಣೆ: ಜು.29 ನಾಮಪತ್ರ ಸಲ್ಲಿಸಲು ಕೊನೆಯ ದಿನ

Untitled
Published on

ಮಂಡ್ಯ: ಜಿಲ್ಲಾ ಪೊಲೀಸ್ ನೌಕರರ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿ ಆಯ್ಕೆಗೆ ಆ.6ರಂದು ಚುನಾವಣೆ ನಿಗದಿಪಡಿಸಲಾಗಿದೆ. ಅಂತೆಯೇ ಅಭ್ಯರ್ಥಿಗಳು ಜು.29ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ಗಂಟೆಯೊಳಗೆ ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

ಜು.30ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜು.31ರಂದು ಮಧ್ಯಾಹ್ನ 3ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿರಲಿದೆ. ಅದೇ ದಿನ ಅಭ್ಯರ್ಥಿಗಳಿಗೆ ಚಿಹ್ನೆ ನೀಡಲಾಗುವುದು. ಆ.6ರಂದು ನಗರದ ಪೊಲೀಸ್ ಕಾಲನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 4ರವರೆಗೆ ಮತದಾನ ನಡೆಯಲಿದೆ. ಅಂತೆಯೇ ಮತದಾನದ ಬಳಿಕ ಮತ ಎಣಿಕೆ ಮಾಡಿ ಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ಸಿ.ಎ.ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net