ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಲಾಗಿದೆ. ಮೇ 9ರಿಂದ ಬೆಳಗ್ಗೆ 10ರಿಂದ ಸಂಜೆ 4.30ರ ವರೆಗೆ ಶಿಬಿರ ನಡೆಯಲಿದ್ದು, ಆಸಕ್ತರು ದೂ.0821-2515944 ಸಂಪರ್ಕಿಸಬಹುದು ಎಂದು ಮುಕ್ತ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.